( ‘ನೆಹರೂ ಪರದೆ ಸರಿಯಿತು’ ಪುಸ್ತಕದಿಂದ ಆಯ್ದ ಭಾಗ)
ಥೂ! ಗಾಂಧೀಜಿ ಹೇಳ್ತಾರಲ್ಲ , ಗ್ರಾಮ ಸ್ವರಾಜ್ಯ-ಸ್ವದೇಶೀ … ಇವೆಲ್ಲ ಯೋಚಿಸಲಿಕ್ಕೂ ಅನರ್ಹವಾದವು’ ಹೀಗೆನ್ನುತ್ತಿದ್ದವರು ಯಾರಿರಬಹುದು ಹೇಳಿ? ಸಾವರ್ಕರಾ? ಅಂಬೇಡ್ಕರಾ? ಜಿನ್ನಾನಾ? ಪಟೇಲರಾ? ಖಂಡಿತಾ ಅಲ್ಲ, ಹಾಗೆನ್ನುತ್ತಿದ್ದವರು, ಸ್ವತಃ ಗಾಂಧೀಜಿಯವರ ಅನುಯಾಯಿ ನೆಹರೂ!
ಯಾರನ್ನು ಗಾಂಧೀಜಿ ‘ನನ್ನ ನಂತರ ನನ್ನ ಮಾತನಾಡುವವ’ ಎಂದು ಕರೆಯುತ್ತಿದ್ದರೋ ಅದೇ ವ್ಯಕ್ತಿ. ಯಾರನ್ನು ಇಡಿಯ ದೇಶ ಗಾಂಧೀಜಿಯ ಚಿಂತನೆಗಳ ಶಾಶ್ವತ ರೂಪ ಎಂದು ಭಾವಿಸುತ್ತಿದ್ದರೋ ಆತ. ಹೌದು ಅದೇ ನೆಹರೂ ಸ್ವದೇಶಿ ಚಿಂತನೆ ನಡೆಸಿದರೆ ದೇಶ ಹಾಳಾಗಿ ಹೋಗುತ್ತದೆ, ದೇಶವನ್ನು ಕಟ್ಟಬೇಕೆಂದರೆ ದೊಡ್ಡ ದೊಡ್ಡ ಯಂತ್ರಗಳ ಮೇಲೆ ಕಟ್ಟಬೇಕು, ಅದರಿಂದಲೇ ಆರ್ಥಿಕ ಸ್ಥಿತಿ ಬಲಗೊಳ್ಳುವುದು ಸಾಧ್ಯ ಎನ್ನುತ್ತಿದ್ದರು.
ದೇಶ ಅನಾಚೂನವಾಗಿ ಬೆಳೆದು ಬಂದದ್ದೇ ಗ್ರಾಮ ಸ್ವರಾಜ್ಯದ ಆಧಾರದ ಮೇಲೆ. ಲಕ್ಷಾಂತರ ಹಳ್ಳಿಗಳು ಉದ್ಧಾರವಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಹಿಂದಿನಿಂದಲೂ ಹೇಳಿಕೊಂಡು ಬಂದಿದ್ದರು. ಆದರೆ ನೆಹರೂ ಅವೆಲ್ಲವನ್ನೂ ತಿರಸ್ಕರಿಸಿದರು. ದೊಡ್ಡ ದೊಡ್ಡ ಯಂತ್ರಗಳು ಗೃಹಕೈಗಾರಿಕೆಗಳನ್ನು ಮೀರಿ ಬೆಳೆಯಬೇಕು. ಆಗ ದೇಶದಲ್ಲಿ ಹಣ ಸಂಗ್ರಹವಾಗುತ್ತದೆ. ಆ ಹಣ ಬಡವರಿಗೂ ಸೇರುತ್ತದೆ ಎಂಬುದು ಅವರ ಲೆಕ್ಕಾಚಾರ. ದೇಶ ಸಾವಿರಾರು ವರ್ಷಗಳಿಂದ ಅನುಸರಿಸಿಕೊಂಡು ಬಂದ ಮಾರ್ಗವನ್ನೇ ಈಗ ನೆಹರೂ ಬದಲಿಸ ಹೊರಟಿದ್ದರು. ಪಾಪ! ಗಾಂಧೀಜಿಯಂತಹ ಮಹಾನ್ ವ್ಯಕ್ತಿಯೊಂದಿಗೆ ಒಡನಾಡಿಯೂ ತಮ್ಮ ಆ ತನಕದ ಆಡಂಬರತನವನ್ನು ಬದಲಿಸಿಕೊಂಡು ಸರಳವಾಗಲಾರದ ವ್ಯಕ್ತಿ, ಸರಳವಾಗಿದ್ದ ದೇಶವನ್ನು ದಿಢೀರ್ ಸಿರಿವಂತಿಕೆಯತ್ತ ಎಳೆದು ತರುವ ಯೋಚನೆಗೆ ಶುರುವಿಟ್ಟರು.
ನೆಹರೂ ಸ್ವತಃ ಆರ್ಥಿಕ ತಜ್ಞರಲ್ಲ , ಯಂತ್ರಗಳ ಬಗ್ಗೆ ಮಾತನಾಡಬಲ್ಲ ಇಂಜಿನಿಯರೂ ಆಗಿರಲಿಲ್ಲ. ಅವರು ಬರಿ ಕನಸುಗಾರರಾಗಿದ್ದರು. ತಾವು ಕಂಡ ಕನಸನ್ನು ನನಸುಗೊಳಿಸಬೇಕು. ಆ ಮಾರ್ಗದಲ್ಲಿರುವ ತೊಡಕುಗಳು ಏನೇ ಇರಲಿ, ಅದರಿಂದ ದೇಶ ನಿರ್ನಾಮವಾಗಿಯೇ ಹೋಗಲಿ ಚಿಂತೆ ಇಲ್ಲ. ಕನಸು ಮಾತ್ರ ಸಾಕಾರವಾಗಬೇಕು ಎಂಬ ಹುಚ್ಚು ಅವರಲ್ಲಿತ್ತು! ಅದಕ್ಕೆ ಮೆಹಲೋನವೀಸ್ ಎಂಬುವವನ ಜೊತೆ ಪಡೆದರು.
ಆತ ಮತ್ತೊಬ್ಬ ನೆಹರೂ. ಇತ್ತ ಇಂಜಿನಿಯರ್ ಅಲ್ಲ, ಅತ್ತ ಆರ್ಥಿಕತಜ್ಞನೂ ಅಲ್ಲ. ಬೇರೆಡೆಯ ಯೋಜನೆಗಳನ್ನು ಕದ್ದು ತನ್ನದೇ ಯೋಜನೆ ಇದು ಎಂದು ನಂಬಿಸಬಲ್ಲ ಮೋಸಗಾರ ಅಷ್ಟೇ. ಆತ ಅಂಕಿ-ಅಂಶಗಳನ್ನು ಕೊಟ್ಟು ಯಂತ್ರಗಳಿಂದಲೇ ದೇಶದ ಅಭಿವೃದ್ಧಿ ಎಂದು ಸಾಸಿ ತೋರುತ್ತಿದ್ದ. ಅದನ್ನು ಸಾಕಾರಗೊಳಿಸಲೆಂದೇ ರಷ್ಯಾದ ಮಾದರಿಯ ಪಂಚವಾರ್ಷಿಕ ಯೋಜನೆಗಳನ್ನು ಜಾರಿಗೆ ತರಲು ಒತ್ತಡ ಹೇರಿದ.
ವಾಸ್ತವವಾಗಿ ಆಗತಾನೆ ಸ್ವಾತಂತ್ರ್ಯ ಪಡೆದ ದೇಶ ತನ್ನ ಆಂತರಿಕ ಶಕ್ತಿ ಯಾವುದೆಂದು ಗುರುತಿಸಿಕೊಂಡು ಅದನ್ನು ಸೂಕ್ತವಾಗಿ ಬಳಸಿಕೊಳ್ಳುವ ಮೂಲಕ ಬೆಳೆಯಬೇಕು. ಅದನ್ನು ಬಿಟ್ಟು, ಅವರು ಹಾಗೆ ಬೆಳೆದಿದ್ದಾರೆ; ಇವರು ಹೀಗೆ ಬೆಳೆದಿದ್ದಾರೆ ಎನ್ನುತ್ತಾ ಕುಳಿತರೆ, ಅವರನ್ನು ಅನುಸರಿಸುವ ಪ್ರಯತ್ನ ಮಾಡಿದರೆ ಖಂಡಿತ ಬೆಳವಣಿಗೆ ಅಸಾಧ್ಯ.ಭಾರತದ ಮಟ್ಟಿಗೆ ಹೇಳುವುದಾದರೆ, ಗ್ರಾಮಶಕ್ತಿ ಇಲ್ಲಿನ ಆಂತರಿಕ ಶಕ್ತಿ. ಅಲ್ಲಿ ಕಳೆದು ಹೋಗುತ್ತಿರುವ ನಮ್ಮವರ ಕಲೆ-ಕುಸುರಿ ಕೆಲಸಗಳನ್ನು ಬಳಸಿಕೊಳ್ಳಬೇಕಿತ್ತು. ಕೃಷಿ ಕಾರ್ಯದಲ್ಲಿ ಕ್ಷಮತೆಯನ್ನು ಹೆಚ್ಚಿಸುವ ಯತ್ನ ಮಾಡಬೇಕಿತ್ತು. ಆದರೆ ನೆಹರೂ ಅವೆಲ್ಲವನ್ನು ಬದಿಗಿಟ್ಟು ಕೈಗಾರಿಕೀಕರಣ ಮಾಡುವ ಪ್ರಯತ್ನ ಶುರುವಿಟ್ಟರು. ಅದಕ್ಕೆ ಹಣ ಎಲ್ಲಿಂದ ತರಬೇಕು? ಸಾಲ ತಂದರು. ಮೊದಲ ಬಾರಿಗೆ ಭಾರತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಲ ಎತ್ತುವ ಚಾಳಿ ಶುರುವಿಟ್ಟಿತು. ಆ ಹಣವನ್ನು ನೆಹರೂ ಎಲ್ಲೆಲ್ಲಿ ಹೂಡಿಕೆ ಮಾಡಿದರೋ ಅಲ್ಲಿಂದ ಹೇಳುವಷ್ಟು ಹಣ ಹುಟ್ಟಲಿಲ್ಲ. ಮತ್ತೆ ಸಾಲ-ಮತ್ತೆ ನಷ್ಟ. ಈ ಚಕ್ರ ಎಲ್ಲಿಯವರೆಗೂ ಮುಂದುವರೆಯಿತೆಂದರೆ, ಇಂದು ಸಾಲದ ಮೇಲೆಯೇ ಬದುಕುವ ಚಟವನ್ನು ನಮ್ಮ ನಾಯಕರು ಹಚ್ಚಿಸಿಕೊಂಡಿದ್ದಾರೆ. ದೇಶ ಅಕ್ಷರಶಃ ಸಾಲದ ಉರುಳಲ್ಲಿ ಸಿಕ್ಕು ಒದ್ದಾಡುತ್ತಿದೆ. ನೆಹರೂ ಹುಟ್ಟಿಸಿದ ಆ ಆರ್ಥಿಕ ಕೂಸು ನೆಹರೂ ಕಾಲದಲ್ಲಿಯೇ ಸತ್ತುಹೋಯಿತು. ಈ ದೇಶದ ಜನ ಅಪಾರ ತೆರಿಗೆ ಕಟ್ಟುವ ಮೂಲಕ ಆ ಕೂಸಿಗೆ ಕೃತಕ ಉಸಿರಾಟ ಮಾಡುತ್ತಿದ್ದಾರೆಯೇ ಹೊರತು ಮತ್ತೇನಲ್ಲ!
ನೆಹರೂ, Public Sector Unitಗಳನ್ನು ಸರ್ಕಾರದ ವಶಕ್ಕೆ ಪಡೆದರು. ಗೃಹಕೈಗಾರಿಕೆಗಳನ್ನು ನಡೆಸುವುದು, ಅಲ್ಲಿನ ವಸ್ತುಗಳನ್ನು ಮಾರುಕಟ್ಟೆಗೊಯ್ಯುವುದು ಇವಲ್ಲಾ ಸಾಧ್ಯವಾದಷ್ಟೂ ಕಷ್ಟವಾಗುವಂತೆ ನೋಡಿಕೊಂಡರು. ಲೈಸೆನ್ಸು, ಪರ್ಮಿಟ್ಟು ಎಂದೆಲ್ಲ ರಗಳೆಗಳು ಶುರುವಾಗಿದ್ದು ಇದೇ ಕಾಲಕ್ಕೆ. ಸಮಾಜವಾದದ ಹೆಸರಲ್ಲಿ, ಸರ್ವರಿಗೂ ಸಮಪಾಲು ಎನ್ನುತ್ತಿದ್ದ ನೆಹರೂ ಕೊನೆಗಾಲಕ್ಕೆ ಈ ರೀತಿ ಬದಲಾದದ್ದು, ಬಡವರ ಶೋಷಣೆಗೆ ನಿಂತದ್ದು ಎಲ್ಲರಿಗೂ ಅಚ್ಚರಿತಂದಿತ್ತು. ಬಡತನ ನಿರ್ಮೂಲನೆಗೆ ಎಂದು ಶುರುವಿಟ್ಟ ಆರ್ಥಿಕ ಯೋಜನೆಗಳು ಬಡವರ ನಿರ್ಮೂಲನೆ ಮಾಡಿದ್ದು ಖಂಡಿತ ಸುಳ್ಳಲ್ಲ.
ಗಾಂಧೀಜಿಯ ಗ್ರಾಮರಾಜ್ಯದ ಕಲ್ಪನೆಯನ್ನು ಅಮೆರಿಕದಂತಹ ರಾಷ್ಟ್ರಗಳೇ ಮೆಚ್ಚಿ ಸ್ವೀಕರಿಸಿದ್ದವು. ಅವರಲ್ಲಿ ಗೃಹಕೈಗಾರಿಕೆಗಳ ಪರಿಕಲ್ಪನೆ ಇಲ್ಲದಿದ್ದರೂ, ಹೆಚ್ಚು -ಹೆಚ್ಚು ಜನ ಸೇರಿ ಕೆಲಸ ಮಾಡುವಂತಹ ಸಣ್ಣ ಪ್ರಮಾಣದ ಕೈಗಾರಿಕೆಗಳನ್ನು ಸ್ಥಾಪಿಸಿದರು. ಲಕ್ಷಾಂತರ ಜನರಿಗೆ ಉದ್ಯೋಗ ನೀಡಬಲ್ಲ ಏಕೈಕ ಮಾರ್ಗ ಅದು. ಅಕ್ಷರಶಃ ಆ ನೀತಿಯನ್ನು ಭಾರತ ಪಾಲಿಸಬೇಕಿತ್ತು. ಇಲ್ಲಿನ ಜನಸಂಖ್ಯೆಗೆ ತಕ್ಕಂತಹ ಉದ್ಯೋಗ ನೀಡಬೇಕಾದರೆ
ನೆಹರೂ ಎಂದಿಗೂ ಗಾಂಧೀಜಿ ಹೇಳಿದ ಮಾರ್ಗದಲ್ಲಿ ನಡೆದವರೇ ಅಲ್ಲ. ಗಾಂಧೀಜಿ ಆಶ್ರಮದಲ್ಲಿದ್ದ ನಿಷ್ಠಾವಂತ ಕಾರ್ಯಕರ್ತರು ನೆಹರೂ ಪಾಲಿಗೆ ನಿಯತ್ತಿನ ಸಿಪಾಯಿಗಳು. ಚುನಾವಣೆ ಬಂತೆಂದರೆ ಸಾಕು, ಅಲ್ಲಿ ನೆಹರೂ ಹಾಜರ್. ಅದೇ ಕಾರ್ಯಕರ್ತರನ್ನು ಪುಸಲಾಯಿಸಿ, ಬಡಿದೆಬ್ಬಿಸಿ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದರು. ಆ ಕಾರ್ಯಕರ್ತರ ಪ್ರಾಬಲ್ಯವಿದ್ದ ಕ್ಷೇತ್ರದಲ್ಲಿ ಅವರದೇ ಅಭ್ಯರ್ಥಿಯನ್ನು ನಿಲ್ಲಿಸಲೂ ಹಿಂದೆ-ಮುಂದೆ ನೋಡುತ್ತಿರಲಿಲ್ಲ. ಆಮೇಲೆ..? ಆಮೇಲೇನು? ಅದೇ ಗಾಂಧೀಜಿ ಆಶ್ರಮದಿಂದ ಹೊರಸೂಸುತ್ತಿದ್ದ ಜಗ ಬೆಳಗುವ ಚಿಂತನೆಯನ್ನು ಮೂಲೆಗೊತ್ತುತ್ತಿದ್ದರು. ಗಾಂಧೀಜಿಯ ಕಟ್ಟಾ ಅನುಯಾಯಿಯೊಬ್ಬರು ಮೂರು ಬಾರಿ ಚುನಾವಣೆ ರ್ಸ್ಪಸಿ ಗೆದ್ದರು. ಸರಕಾರ ಕೊಟ್ಟ ಸೌಲಭ್ಯಗಳನ್ನೆಲ್ಲಾ ಹಿಂದಿರುಗಿಸಿ ಗಾಂಜಿ ಹೇಳಿದ ಮಾರ್ಗದಲ್ಲಿ ನಡೆದರು. ಆದರೆ ನೆಹರೂ ಅವರ ಮಾತಿಗೆ ಎಂದೂ ಬೆಲೆಯನ್ನೇ ಕೊಡಲಿಲ್ಲ. ಗ್ರಾಮಸ್ವರಾಜ್ಯದ ಕಲ್ಪನೆಯನ್ನು ಮೂದಲಿಸಿ ದೊಡ್ಡ ಕಾರ್ಖಾನೆಗಳನ್ನು ಬೆಂಬಲಿಸುವುದರಲ್ಲಿಯೇ ಕಾಲಕಳೆದರು. ಆ ಕಾರ್ಖಾನೆಗಳಿಗಾಗಿ ಸಾಲತಂದರು. ದೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿರಋಣಿಗಳನ್ನಾಗಿಸಿ(?) ಹೊರಟರು.
ಇದೇ ವೇಳೆಗೆ, ಭಾರತದ ನಂತರ ಸ್ವಾತಂತ್ರ್ಯ ಪಡೆದಿದ್ದ ರಾಷ್ಟ್ರಗಳೆಲ್ಲ ಮಿಂಚಿನಂತೆ ಬೆಳೆದವು. ರಾಷ್ಟ್ರದ ಅಂತಃಶಕ್ತಿಯನ್ನು ಗುರುತಿಸಿ, ನಿಸ್ವಾರ್ಥತೆಯಿಂದ ರಾಷ್ಟ್ರವನ್ನು ಮುನ್ನಡೆಸಿದವರೆಲ್ಲ ಜಗತ್ತಿನ ಭೂಪಟದಲ್ಲಿ ಕಂಗೊಳಿಸುವಂತೆ ಬೆಳೆದರು. ಅಲ್ಲಿ ಬೆಳೆದದ್ದು ವೈಯಕ್ತಿಕವಾಗಿ ಆ ವ್ಯಕ್ತಿಗಳಲ್ಲ , ರಾಷ್ಟ್ರ!. ಆದರೆ ಭಾರತದಲ್ಲಿ ನೆಹರೂ ಹಠಕ್ಕೆ ಬಿದ್ದು, ತಾವು ಬೆಳೆಯಬೇಕೆಂದರು. ಜಗತ್ತಿನ ಎಲ್ಲ ರಾಷ್ಟ್ರಗಳು ತನ್ನ ಬಗ್ಗೆಯೇ ಮಾತಾಡಬೇಕೆಂದು ಆಶಿಸಿದರು. ಆ ಆಸೆಯ ಪೂರೈಕೆಗಾಗಿ ದೇಶದ ಹಿತಾಸಕ್ತಿಗಳನ್ನು ಬಲಿಕೊಡಲಿಕ್ಕೂ ಅವರು ಹಿಂದೆ-ಮುಂದೆ ನೋಡಲಿಲ್ಲ!!
ಭಾರತ ಸ್ವತಂತ್ರವಾಗಿ ಬಹುಕಾಲದ ನಂತರ ಅಕಾರ ಪಡೆದ ಸಿಂಗಾಪೂರದ ಲೀ ಕ್ವಾನ್ಯೂರನ್ನು ಈ ಸಂದರ್ಭದಲ್ಲಿ ಉಲ್ಲೇಖಿಸುವುದು ಸೂಕ್ತ. ಸ್ಪಷ್ಟ ಉದ್ದೇಶ, ಚಿಂತನೆಗಳೊಂದಿಗೆ ದೇಶವನ್ನು ಎತ್ತರಕ್ಕೆ ಬೆಳೆಸಬೇಕೆಂಬ ಹಠಕ್ಕೆ ಬಿದ್ದ ಕ್ವಾನ್ಯೂ ಅಂತಾರಾಷ್ಟ್ರೀಯ ಮಟ್ಟದಿಂದ ವ್ಯಾಪಾರಿಗಳನ್ನು ಸಿಂಗಾಪೂರಕ್ಕೆ ಸೆಳೆದರು. ಅದೇ ವೇಳೆಗೆ ಸಿಂಗಾಪೂರದ ಕಲೆ ಜಗತ್ತು ಮೆಚ್ಚುವಂತೆ ನೋಡಿಕೊಂಡರು. ಸಿಂಗಪೂರ್ ನೋಡುತ್ತ, ನೋಡುತ್ತ ಕಣ್ಣು ಕುಕ್ಕುವ ನಗರವಾಗಿಬಿಟ್ಟಿತು. ಕ್ವಾನ್ಯೂ ಒಮ್ಮೆ ಮಾತನಾಡುತ್ತ, ‘ಹೊರಗಡೆಯಿಂದ ಬರುವ ತಂತ್ರಜ್ಞಾನ, ಬಂಡವಾಳವನ್ನು ಸಿಂಗಾಪೂರ ಸ್ವಾಗತಿಸುತ್ತಿದೆ. ಆದರೆ ಆ ನೆಪದಲ್ಲಿ ಅದು ತನ್ನತನವನ್ನು ಕಳೆದುಕೊಳ್ಳಲು ಸಿದ್ಧವಿಲ್ಲ’ ಎಂದಿದ್ದರು. ‘ನಾಯಕರು, ಅಕಾರಿಗಳು, ನಿರ್ಣಯ ಮಾಡಬಲ್ಲ ಜನ ಇವರೆಲ್ಲ ಮೊದಲು ಶಿಸ್ತನ್ನು ಪಾಲಿಸಬೇಕು. ಶಿಸ್ತನ್ನು ಇತರರ ಮೇಲೆ ಹೇರುವ ಮುನ್ನ ಅದನ್ನು ಅನುಸರಿಸಿ ತೋರಿಸಬೇಕು. ಅವರು ಮೊದಲು ಭ್ರಷ್ಟಾಚಾರರಹಿತರಾಗಿ ಜನರಿಗೆ ಉದಾಹರಣೆಯಾಗಬೇಕು’ ಎಂದೂ ಹೇಳಿದ್ದರು. ಅವೆಲ್ಲ ನೆಹರೂ ಕಿವಿಗೆ ಬೀಳುವುದು ಸಾಧ್ಯವೇ ಇರಲಿಲ್ಲ. ಬಿದ್ದರೂ ಕ್ವಾನ್ಯೂ ಹೇಳಿದ ಯಾವುದನ್ನೂ ಅವರಿಗೆ ಮಾಡಿ ತೋರಿಸುವುದು ಸಾಧ್ಯವಿರಲಿಲ್ಲ. ಶಿಸ್ತು, ಚಿಂತನೆಗಳಲ್ಲಿನ ಸ್ಪಷ್ಟತೆ, ಇವು ನೆಹರೂ ಪಾಲಿಗೆ ದೂರ-ಬಹುದೂರ! ಚೆಂದದ ಬಟ್ಟೆ, ಭಾಷಣ, ಹೊಗಳುಭಟರ ಸಹವಾಸ ಅವರಿಗೆ ಹೇಳಿ ಮಾಡಿಸಿದಂಥವಾಗಿದ್ದವು!
‘ನಿಮ್ಮ ದೇಶದಲ್ಲಿ ಪ್ರತಿಭೆಗಳಿಗೆ ಸೂಕ್ತ ಅವಕಾಶಕೊಡುತ್ತಿಲ್ಲ. ಅವರಿಗೆ ತಮ್ಮ ಸಾಧನೆ ತೋರ್ಪಡಿಸಲು ಅನುಕೂಲವಾಗುವಂತಹ, ಆರ್ಥಿಕ-ಸಾಮಾಜಿಕ-ರಾಜಕೀಯ ಪರಿಸರದ ನಿರ್ಮಾಣ ಮಾಡಿಕೊಡುತ್ತಿಲ್ಲ. ಇದೇ ಭಾರತೀಯರು ಸಿಂಗಾಪೂರಕ್ಕೆ ಬಂದರೆ ಅದ್ಭುತ ಸಾಧನೆ ಮಾಡುತ್ತಾರೆ. ಆದರೆ ಇಲ್ಲಿ ಅವರಿಂದ ಸಾಧ್ಯವಿಲ್ಲ’ ಮುಂತಾದ ವಿಚಾರಗಳನ್ನು ಮನಸ್ಸಿಗೆ ನಾಟುವಂತೆ ಹೇಳಿ ‘ಭಾರತ ಬೆಳೆದರೆ ನಮಗೆ ಲಾಭವಿದೆ. ಅದಕ್ಕೆ ಸ್ವಾರ್ಥದಿಂದ ಭಾರತ ಬೆಳೆಯಲಿ ಎಂದು ಆಶಿಸುತ್ತಿದ್ದೇನೆ’ ಎಂದು ಕ್ವಾನ್ಯೂ ಹೇಳಿದ್ದರು.
ಏಷ್ಯಾದ ಬಹುತೇಕ ರಾಷ್ಟ್ರಗಳು ಹೀಗೆ ಭಾರತ ಆರ್ಥಿಕವಾಗಿ ಶಕ್ತಿಯುತವಾಗುವುದನ್ನು ಕಾಯುತ್ತ ಕುಳಿತಿದ್ದವು. ದಶಕಗಳಷ್ಟು ದೀರ್ಘಕಾಲ ಕಾದವು. ಭಾರತ ಪ್ರಬಲವಾಗುವ ಬದಲು, ಆರ್ಥಿಕವಾಗಿ ದುರ್ಬಲವಾಗುತ್ತ ಸಾಗಿದಂತೆಲ್ಲ ಹತಪ್ರಭವಾದವು. ಜಪಾನ್-ಚೀನಾಗಳ ಮೊರೆಹೊಕ್ಕು ಸುಮ್ಮನಾದವು. ನೆಹರೂ ಯೋಜನೆಗಳ ಮೇಲೆ ಯೋಜನೆಗಳನ್ನು ರೂಪಿಸಿದರು. ಪ್ರತಿಯೊಂದೂ ಬಡ ಭಾರತದಲ್ಲಿ ಸಂಪತ್ತನ್ನು ಸೃಷ್ಟಿಸುವ (ನೆನಪಿಡಿ! ಸಂಪತ್ತನ್ನು ಗಳಿಸುವುದಲ್ಲ ) ಯೋಜನೆಗಳೇ ಆದವು. ಅದಕ್ಕೆ ಸಾಲ ತರಲಾಯಿತು. ತಂದ ಸಾಲದಲ್ಲಿ ಬಹುಪಾಲು ನೆಹರೂ ಮತ್ತವರ ತಂಡಕ್ಕೇ ಖರ್ಚಾಯಿತು. ಮಂತ್ರಿಗಳು -ರಾಜಕಾರಣಿಗಳು-ಅಕಾರಿವರ್ಗ ಇವರೆಲ್ಲರ ಖರ್ಚುವೆಚ್ಚ ಅಷ್ಟು ಅಪಾರವಾಗಿತ್ತು!
ಭಾರತದಲ್ಲಿ ಹುಟ್ಟುತ್ತಿರುವ -ಇನ್ನೂ ಹುಟ್ಟದಿರುವ ಮಗುವೂ ಕೂಡ ಸಾಲದ ಹೊರೆ ಹೊರಲೇಬೇಕಾಯಿತು. ಮತ್ತು ಪರಿಸ್ಥಿತಿಗಳನ್ನು ಅವಲೋಕಿಸಿದ ರಾಷ್ಟ್ರಪತಿ ಡಾ| ಬಾಬು ರಾಜೇಂದ್ರ ಪ್ರಸಾದರು ದ್ವಿತೀಯ ಪಂಚವಾರ್ಷಿಕ ಯೋಜನೆ (೨ನೇ ಜೂನ್ ೧೯೫೭)ಯ ಮುನ್ನ ನೆಹರೂಗೆ ಪತ್ರ ಬರೆದರು,
‘ನಾವು ಯೋಜನೆಗಳಲ್ಲಿ ತೊಡಗಿಸುತ್ತಿರುವ ಹಣ ಸರಿಯಾಗಿ ಬಳಕೆಯಾಗುತ್ತಿದೆಯೋ ಇಲ್ಲವೋ ಎಂಬುದನ್ನು ಗಮನಿಸಲಿಕ್ಕೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ಭಾವಿಸಿದ್ದೇನೆ…. ಹಾಗೇನಾದರೂ ಆಗದಿದ್ದಲ್ಲಿ, ಜನರ ಬೆವರಿನ ಹಣ, ತ್ಯಾಗದ ಹಣ ವಿಪತ್ತಿಗಾಗಿ ಖರ್ಚಾದಂತಾಗುತ್ತದೆ. ನಾವು ಎರಡನೇ ಪಂಚವಾರ್ಷಿಕ ಯೋಜನೆಗಳಿಗೆಂದೇ ಜನರ ಮೇಲೆ ತೆರಿಗೆಯ ಭಾರ ಹೇರಿದ್ದೇವೆ. ಆದರೆ ಇದೇ ಸಂದರ್ಭದಲ್ಲಿ ಹೊಸ ಆರ್ಥಿಕ ನೀತಿಯನ್ನು ಜಾರಿಗೆ ತರಲು, ಆಡಳಿತಕ್ಕೆಂದು ಮಾಡುತ್ತಿರುವ ಖರ್ಚನ್ನು ಕಡಿತಗೊಳಿಸಲು ಯಾವ-ಯಾವ ಕ್ರಮಗಳನ್ನು ಕೈಗೊಂಡಿದ್ದೇವೆಂಬುದು ನನಗೆ ತಿಳಿಯುತ್ತಿಲ್ಲ. ಹನಿ ಹನಿ ಸೋರಿ ಅದು ಖಾಲಿಯೂ ಆಗಬಹುದು. ಅದಕ್ಕೆ ಪ್ರತಿಯೊಂದು ವಿಭಾಗಗಳೂ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಯಾವುದೇ ಯೋಜನೆಗಳನ್ನು ಕೈಗೊಳ್ಳುವ ಮುನ್ನ ಅದು ನಮ್ಮ ಆರ್ಥಿಕ ಪರಿಸ್ಥಿತಿಗೆ ಸೂಕ್ತವಾಗಿ ಹೊಂದಾಣಿಕೆಯಾಗುವಂತಿರಬೇಕು. ಕೊರತೆ ನಿರ್ಮಾಣವಾಗಿ ಜನರ ಮೇಲೆ ತೆರಿಗೆಯ ಭಾರ ಅಕವಾಗದಂತೆ ನೋಡಿಕೊಳ್ಳುವ ವ್ಯವಸ್ಥೆ ಇರಬೇಕು’ ಎಂದೆಲ್ಲ ಬುದ್ಧಿಮಾತು ಹೇಳಿದ್ದರು.
ಕೇಳುವ ವ್ಯವಧಾನ ನೆಹರೂಗಿರಲಿಲ್ಲ. ಆ ಪತ್ರ ಅದ್ಯಾವ ಬುಟ್ಟಿ ಸೇರಿತೋ ದೇವರೇ ಬಲ್ಲ.
ನೆಹರೂ ಪಾಲಿಗೆ ಸರ್ಕಾರ ನಡೆಸುವುದೆಂದರೆ ಐಷಾರಾಮಿ ಹೋಟೇಲು ನಡೆಸಿದಂತೆ. ಅಲ್ಲಿ ಎಲ್ಲವೂ ವೈಭವೋಪೇತವಾಗಿರಬೇಕು. ಅದಕ್ಕೆ ಅಗತ್ಯವಿರುವಷ್ಟು ಹಣ ದೊರೆಯದಿದ್ದರೆ ಸಾಲವಾದರೂ ತರಬೇಕು. ಇದು ಅವರ ಚಿಂತನೆ. ಅದಕ್ಕೆ ತಕ್ಕಂತೆ ಭಾರತ ಒಂದು ವೈಭವೋಪೇತ ಹೋಟೆಲಿನಂತಾಯಿತೇ ಹೊರತು ರಾಷ್ಟ್ರವಾಗಲಿಲ್ಲ, ಶಕ್ತಿಯಾಗಲಿಲ್ಲ!
ಯೋಜನೆಗಳ ಹೆಸರಿನಲ್ಲಿ ಖರ್ಚು ಮಾಡಿದ ಒಂದೊಂದು ಹಣವೂ ಸೇರಬೇಕಾದ ಸ್ಥಳ ಸೇರಲಿಲ್ಲ. ಕೆಲಸವೇನೋ ಬೇಕಾದಷ್ಟಾಯ್ತು. ಆದರೆ ಗುಣಮಟ್ಟ ಕಳಪೆಯಾಯಿತು. ೧೯೫೨-೫೩ರಲ್ಲಿ ಒಂದು ಕೊಳವೆ ಬಾವಿ ೨೦೦ ಎಕರೆಗಳ ಭೂಮಿಗೆ ನೀರುಣಿಸಲು ಶಕ್ತವಾಗಿದ್ದರೆ, ಪಂಚವಾರ್ಷಿಕ ಯೋಜನೆಗಳ ಫಲವಾಗಿ ಸಿಕ್ಕಸಿಕ್ಕಲ್ಲಿ ಕೊರೆದ ಕೊಳವೆ ಬಾವಿಗಳು ೧೯೫೫-೫೬ರ ವೇಳೆಗೆ ಸರಾಸರಿ ೬೦ ಎಕರೆ ಭೂಮಿಯನ್ನು ಮಾತ್ರ ತಣಿಸಬಲ್ಲವಾಗಿದ್ದವು. ಹಣ ಸುರಿದದ್ದು ವ್ಯರ್ಥವಾಗಿತ್ತು. ಸರ್ಕಾರ ಜನ ಮಾಡುತ್ತಿದ್ದ ಕೆಲಸಗಳನ್ನು ತಾನೇ ಮಾಡಲು ಮುಂದಾದ್ದರಿಂದ ಜನರೂ ಆಲಸಿಗಳಾದರು. ಕೆರೆ ಹೂಳೆತ್ತಬೇಕಿದ್ದರೂ ಸರ್ಕಾರದ ಮರ್ಜಿಗೆ ಕಾಯಲು ಶುರುವಿಟ್ಟರು. ಇಡಿಯ ದೇಶ ನೈತಿಕ ತಳಹದಿಯನ್ನು ಕಳೆದುಕೊಳ್ಳಲು ಶುರುವಿಟ್ಟಿತು.
ಅವುಗಳ ಎಲ್ಲ ಶ್ರೇಯ ನೆಹರೂವಿಗೇ ಸಲ್ಲಬೇಕು!
ಅಣ್ಣಾವರೆ,
ನೆಹರೂ ಏನೋ ತಮಗೆ ತೋಚಿದಂತೆ ಆ ಕಾಲದಲ್ಲಿ ಮಾಡಿದ್ದರು…ಆದರೆ ದೊಡ್ಡ ತಪ್ಪುಗಳು ಅವರ ವಂಶ ಪಾರಂಪರ್ಯವಾಗಿ ನೆಡೆದುಬಂದ ನೆಹರೂ- ಇಂದಿರಾ-ರಾಜೀವ್ ತರಹ ಸರಪಳಿಯಂತಾ ಶನಿ ಸಂತಾನದಿಂದ ಎಂದರೆ ಉತ್ಪ್ರೇಕ್ಶೆಯಲ್ಲಾ.
ಇನ್ನೂ ರಾಹುಲ್-ಪ್ರಿಯಾಂಕ ಸಂತತಿ ಕೂಡಾ ಬರಲಿದೆ, ಯಾಕೆ ಬರೆದು ಕೈ ನೋವು ಮಾಡಿಕೊಳ್ತೀರಿ?
ತಡೆಯುವ ಶಕ್ತಿ ನಮ್ಗಿದೆಯೆ?
visit:
http://shrungara.wordpress.com
ಇತಿ
ನಿಮ್ಮ ಕತೆಗಾರ
ಶೃಂಗಾರ!
ಈ ದೋರಣೆ ಮರೆತ ದೇಶ ಇಂದು ಯಾವ ಸ್ಥಿತಿ ತಲುಪಿದೆ, ಎಂಬುದು ಸ್ವಯಂ ವೇದ್ಯ. ಬಹಳ ಚೆನ್ನಾಗಿ ನಿರೂಪಿಸಿದ್ದೀರಿ. ನಿಜ ದೇಶ ಬೆಳೆಯಲಿಲ್ಲ ಬದಲಿಗೆ ಕೋಟ್ಯಾಧಿಪತಿಗಳ ಸಂಖ್ಯೆ ಹೆಚ್ಚಿತು. ದೇಶದ ಆಸ್ಥಿಯನ್ನು ಹಂಚಿಕೊಳ್ಳುವ ಬ್ರಷ್ಟ ವ್ಯವಸ್ಥೆ ಕಂಡು ಜನ ರೋಸಿ ಹೋಗುವಂತಾಯ್ತು.
ಹರಿಹರಪುರಶ್ರೀಧರ್
thanks .reall great INDIA
I have been listening about the negative phase of Nehru and I understand the facts.
But when I went through his discovery of India, I was astonished…
was it written by somebody? Can I get some information regarding this….
You told correct brother…